Liquor: ಅಬಕಾರಿ ಇಲಾಖೆಯಲ್ಲಿ ಕಮಿಷನ್ ದಂಧೆ

           ಕಾಂಗ್ರೆಸ್‌ ಸರ್ಕಾರದಡಿ ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ ನಡೆಯುತ್ತಿದೆ. ಒಂದೊಂದು ಲೈಸೆನ್ಸ್‌ ನೀಡಲೂ ಕೋಟಿಗಟ್ಟಲೆ ಲಂಚ ನೀಡಬೇಕಾಗಿದೆ. ಈ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೂ ಪಾಲು ಸಿಗುತ್ತಿರುವ ಕಾರಣ ಸಿಎಂ ಅವರಿಗೆ ದೂರು ನೀಡಿದರೂ ಏನೂ ಸ್ಪಂದನೆ ನೀಡುತ್ತಿಲ್ಲ. ಈ ಕೂಡಲೇ ಸಿಎಂ ಭ್ರಷ್ಟ ಅಬಕಾರಿ ಸಚಿವರ ರಾಜೀನಾಮೆ ಪಡೆಯಬೇಕು. ಇಲ್ಲದಿದ್ದರೆ ನಮ್ಮ ಹೋರಾಟ ಮುಖ್ಯಮಂತ್ರಿಗಳ ವಿರುದ್ಧವೇ ನಡೆಯಲಿದೆ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರು ಎಚ್ಚರಿಸಿದ್ದಾರೆ.

ಕಾಂಗ್ರೆಸ್‌ ಸರ್ಕಾರದಡಿ ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ ನಡೆಯುತ್ತಿದೆ. ಒಂದೊಂದು ಲೈಸೆನ್ಸ್‌ ನೀಡಲೂ ಕೋಟಿಗಟ್ಟಲೆ ಲಂಚ ನೀಡಬೇಕಾಗಿದೆ. ಈ ಹಗರಣದಲ್ಲಿ ಸಿಎಂ ಅವರಿಗೂ ಪಾಲು ಸಿಗುತ್ತಿರುವ ಕಾರಣ ಸಿಎಂ ಅವರಿಗೆ ದೂರು ನೀಡಿದರೂ ಏನೂ ಸ್ಪಂದನೆ ನೀಡುತ್ತಿಲ್ಲ. ಈ ಕೂಡಲೇ ಸಿಎಂ ಭ್ರಷ್ಟ ಅಬಕಾರಿ ಸಚಿವರ ರಾಜೀನಾಮೆ ಪಡೆಯಬೇಕು. ಇಲ್ಲದಿದ್ದರೆ ನಮ್ಮ ಹೋರಾಟ ಮುಖ್ಯಮಂತ್ರಿಗಳ ವಿರುದ್ಧವೇ ನಡೆಯಲಿದೆ ಎಂದು ಹೇಳಿದ್ದಾರೆ. 

ಭೂಮಿಗೆ ಸಂಬಂಧಿಸಿದ ಎಲ್ಲ ಸೇವೆ ಒಂದೇ ಕಡೆ: ಯುಎಲ್‌ಎಂಎಸ್‌ ಯೋಜನೆ ಜಾರಿಗೆ ಸರ್ಕಾರ ಮಹತ್ವದ ರಹೆಜ್ಜೆಭೂಮಿಗೆ ಸಂಬಂಧಿಸಿದ ಎಲ್ಲ ಸೇವೆ ಒಂದೇ ಕಡೆ: ಯುಎಲ್‌ಎಂಎಸ್‌ ಯೋಜನೆ ಜಾರಿಗೆ ಸರ್ಕಾರ ಮಹತ್ವದ ಹೆಜ್ಜೆ"ಈ ವಿಚಾರವಾಗಿ ಬಿಜೆಪಿ ಮತ್ತು ಜೆಡಿಎಸ್ ಸರಣಿ ಟ್ವೀಟ್ ಮಾಡಿದೆ. ಕಾಂಗ್ರೆಸ್‌ ಸರ್ಕಾರದಲ್ಲಿ ಕಮಿಷನ್‌ ದಂಧೆ ನಿತ್ಯನಿರಂತರವಾಗಿದೆ. ಬಿಜೆಪಿ ಸರ್ಕಾರದ ಮೇಲೆ 40% ಎಂಬ ಸುಳ್ಳು ಆರೋಪ ಹೊರಿಸಿ ಅಧಿಕಾರಕ್ಕೆ ಬಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸರ್ಕಾರ ಈಗ ಕಮಿಷನ್‌ ದಂಧೆಯನ್ನೇ ನಿತ್ಯದ ಕಾಯಕವಾಗಿಸಿಕೊಂಡಿದೆ.

ಮದ್ಯದಂಗಡಿಗಳಲ್ಲಿ ಪರವಾನಗಿಯಿಂದ ಹಿಡಿದು ಪ್ರತಿ ಹಂತದಲ್ಲೂ ಸಚಿವರ, ಕರ್ನಾಟಕ ಕಾಂಗ್ರೆಸ್ ಶಾಸಕರ, ಅಧಿಕಾರಿಗಳ ಕೈಬಿಸಿ ಮಾಡಬೇಕು ಎಂದು ಮದ್ಯ ಮಾರಾಟಗಾರರ ಸಂಘದ ಅಧ್ಯಕ್ಷರು ಆರೋಪ ಹೊರಿಸಿದ್ದಾರೆ. ಈ ಕುರಿತು ಮುಖ್ಯಮಂತ್ರಿಗಳಿಗೆ ದೂರು ನೀಡಿದರೂ ಕ್ರಮ ಕೈಗೊಂಡಿಲ್ಲ, ಕಾರಣ ಅಕ್ರಮದಲ್ಲಿ ಸಿಎಂ, ಡಿಸಿಎಂ, ಸಚಿವರ ಪಾಲೂ ಇದೆ. ಭ್ರಷ್ಟಾಚಾರ ಎಸಗಿದ ಸಚಿವರನ್ನು ಸಂಪುಟದಿಂದ ತೆಗೆಯಲು ಹಿಂದೆ ಮುಂದೆ ನೋಡುತ್ತಿರುವ ಮುಖ್ಯಮಂತ್ರಿಗಳು, ಅಬಕಾರಿ ಅಕ್ರಮಕ್ಕೆ ತಮ್ಮ ಸಹಮತವಿದೆ ಎಂಬುದನ್ನು ಸೂಚಿಸುತ್ತಿದ್ದಾರೆಯೇ ಎಂದು ಬಿಜೆಪಿ ಪ್ರಶ್ನೆ ಮಾಡಿದೆ. 

ವಂಚನೆ ಜಾಲದಲ್ಲಿ ಸಿಲುಕಿದ ಬೆಂಗಳೂರು ವಿದ್ಯಾರ್ಥಿ"ಈ ಸಂಬಂಧ ಜೆಡಿಎಸ್ ಟ್ವೀಟ್ ಮಾಡಿದ್ದು, ಅಬಕಾರಿ ಇಲಾಖೆಯ "ಮಂಥ್ಲಿ ಮನಿ ಮಿನಿಸ್ಟರ್‌" ಆರ್.ಬಿ. ತಿಮ್ಮಾಪುರ "ಕಮಿಷನ್‌" ಮತ್ತು "ಕಲೆಕ್ಷನ್‌" ದಂಧೆಗೆ ಮದ್ಯ ಮಾರಾಟಗಾರರು ಹೈರಾಣಾಗಿದ್ದಾರೆ.

ಅಬಕಾರಿ ಇಲಾಖೆಯಲ್ಲಿ ನಡೆಯುತ್ತಿರುವ ಕಮಿಷನ್ ದಂಧೆ, ಭ್ರಷ್ಟಾಚಾರಕ್ಕೆ ಸಿಡಿದೆದ್ದಿರುವ ಮದ್ಯ ಮಾರಾಟಗಾರರ ಸಂಘದ ಅಧ್ಯಕ್ಷರು, ರಾಹುಲ್ ಗಾಂಧಿ, ಕಾಂಗ್ರೆಸ್‌ ಹೈಕಮಾಂಡ್‌ಗೆ ದೂರು ನೀಡಲು ಮುಂದಾಗಿದ್ದಾರೆ. ಮೊನ್ನೆಯಷ್ಟೇ ಬೆಂಗಳೂರು ಅಬಕಾರಿ ಡಿಸಿ 25 ಲಕ್ಷ ರೂಪಾಯಿ ಲಂಚ ಸ್ವೀಕರಿಸುವ ವೇಳೆಯೇ ಲೋಕಾಯುಕ್ತ ಪೊಲೀಸರು ಬಂಧಿಸಿದ್ದರು. ಇದು ಕರ್ನಾಟಕ ಕಾಂಗ್ರೆಸ್‌ ಸರ್ಕಾರದಲ್ಲಿ ಬೇರೂರಿರುವ ಭ್ರಷ್ಟಾಚಾರಕ್ಕೆ ಹಿಡಿದಿರುವ ಕೈಗನ್ನಡಿ.

ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರೇ ನಿಮಗೆ ಕಿಂಚಿತ್ತಾದರೂ ಮಾನ, ಮರ್ಯಾದೆ ಉಳಿಸಿಕೊಂಡಿದ್ದರೇ, ಮೊದಲು ಭ್ರಷ್ಟ ಅಬಕಾರಿ ಸಚಿವ ಆರ್.ಬಿ. ತಿಮ್ಮಾಪುರ್‌ ಅವರನ್ನು ಸಂಪುಟದಿಂದ ಕಿತ್ತೊಗೆಯಿರಿ ಎಂದು ಜೆಡಿಎಸ್ ಹೇಳಿದೆ. 

ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರು, ಅಬಕಾರಿ ಇಲಾಖೆಯಲ್ಲಿ ಎಗ್ಗಿಲ್ಲದೆ ನಡೆಯುತ್ತಿರುವ ಕಮಿಷನ್ ದಂಧೆ, ಭ್ರಷ್ಟಾಚಾರದ ಬಗ್ಗೆ ಬೇಸತ್ತು ಮದ್ಯ ಮಾರಾಟಗಾರರ ಸಂಘದ ರಾಜ್ಯಾಧ್ಯಕ್ಷರಾದ ಎಸ್.ಗುರುಸ್ವಾಮಿ ಅವರು ಈ ಬಗ್ಗೆ ರಾಹುಲ್ ಗಾಂಧಿ ಅವರಿಗೆ ದೂರು ಕೊಡಲು ಮುಂದಾಗಿರುವ ನಡೆ, ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರಿಗೆ ನಾಚಿಕೆಗೇಡಿನ ವಿಷಯ.

Post a Comment

أحدث أقدم
Loading...

Breaking News

ಭ್ರಷ್ಟರ ಬೇಟೆ
ಜಿಲ್ಲಾ ಸುದ್ದಿ is loading...